BREAKING: ರಾಹುಲ್​ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಒಪ್ಪಿಗೆ

Rahul Gandhi
Rahul Gandhi

ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್​  ಸಮ್ಮತಿಸಿದೆ.

ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ರಾಹುಲ್​ ಅವರ ಪರ ವಕೀಲ ಅಭಿಷೇಕ್​ ಮನು ಸಿಂಘ್ವಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​ ಅವರ ಪೀಠದ ಎದುರು ಮನವಿ ಮಾಡಿದರು.

ಇದೇ ಶುಕ್ರವಾರ ಅಂದರೆ ಜುಲೈ 21ರಂದು ವಿಚಾರಣೆಗೆ ಕೋರ್ಟ್​ ಒಪ್ಪಿಕೊಂಡಿದೆ.

ಮೇಲ್ಮನವಿಯಲ್ಲಿ ರಾಹುಲ್​ ಅವರು ಎರಡು ಮನವಿಗಳನ್ನು ಮಾಡಿದ್ದಾರೆ.

ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್​ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದ್ದ ಗುಜರಾತ್​ ಉಚ್ಛ ನ್ಯಾಯಾಲಯದ ಆದೇಶವನ್ನು ತಡೆ ಹಿಡಿಯಬೇಕು.

ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಯುವರೆಗೆ ಗುಜರಾತ್​ ಹೈಕೋರ್ಟ್​ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಮತ್ತು ದೋಷಿ ಎಂದು ನೀಡಲಾಗಿರುವ ಆದೇಶಕ್ಕೆ ತಡೆ ನೀಡಬೇಕು.

ಉಪ ಚುನಾವಣೆ ಘೋಷಿಸಬಹುದು:

ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡು 112 ದಿನಗಳಾಗಿವೆ ಮತ್ತು ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಬಹುದು. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭವಾಗಲಿದೆ ಮತ್ತು ಮಧ್ಯಂತರ ಪರಿಹಾರ ಸಿಗದೇ ಹೋದರೆ ಆ ಕಲಾಪಗಳಲ್ಲಿ ಭಾಗವಹಿಸುವ ಮತ್ತು ನನ್ನ ಪಕ್ಷ ಮತ್ತು ಕ್ಷೇತ್ರವನ್ನು ಪ್ರತಿನಿಧಿಸುವ ಅವಕಾಶದಿಂದ ವಂಚಿತನಾಗುತ್ತೇನೆ

ಎಂದು ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ರಾಹುಲ್​ ಗಾಂಧಿ ವಾದಿಸಿದ್ದಾರೆ.

LEAVE A REPLY

Please enter your comment!
Please enter your name here