ಜೈಲಿನ ಬಾತ್​ರೂಂನಲ್ಲಿ ಕುಸಿದು ಬಿದ್ದ ಮಾಜಿ ಸಚಿವರಿಗೆ ಸುಪ್ರೀಂಕೋರ್ಟ್​ ಜಾಮೀನು

ದೆಹಲಿ ಆಮ್​ ಆದ್ಮಿ ಪಕ್ಷದ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್​ ಅವರಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಆರೋಗ್ಯದ ಕಾರಣದಲ್ಲಿ ಜೈನ್​ ಅವರಿಗೆ ನ್ಯಾಯಮೂರ್ತಿ ಜೆ ಕೆ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಪಿ ಎಸ್​ ನರಸಿಂಹ ಪೀಠ ಜಾಮೀನು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ವರ್ಷದ ಮೇ 30ರಿಂದ ಸತ್ಯೇಂದ್ರ ಜೈನ್​ ಬಂಧನದಲ್ಲಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಿರುವ ಸುಪ್ರೀಂಕೋರ್ಟ್​ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರದಂತೆ ನಿರ್ಬಂಧ ಹೇರಿದೆ.

6 ವಾರಗಳ ಮಧ್ಯಂತರ ಜಾಮೀನಿಗೆ ವಿಚಾರಣಾ ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸುವಂತೆ ಸುಪ್ರೀಂಕೋರ್ಟ್​ ಸೂಚಿಸಿದ್ದು, ಮುಂದಿನ ವಿಚಾರಣೆ ಜುಲೈ 11ಕ್ಕೆ ಮುಂದೂಡಿಕೆ ಆಗಿದೆ.

ನಿನ್ನೆ ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದಿದ್ದ ಸತ್ಯೇಂದ್ರ ಜೈನ್​ ಅವರನ್ನು ಆಸ್ಪತ್ರೆಗೆ ವರ್ಗಾಯಿಸಿ ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.​