ಕೋವಿಡ್ ಪ್ರಕರಣ ಹೆಚ್ಚಳ ಆಗುವ ಆತಂಕದ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಖುದ್ದು ಕೇಂದ್ರ ಆರೋಗ್ಯ ಸಚಿವರೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ಭಾರತ್ ಜೋಡೋ ಯಾತ್ರೆ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದಿದೆ.
ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಮುಗಿದಿದ್ದು, ಈಗ ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದೆ.
ರಾಜಸ್ಥಾನದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಕೋವಿಡ್ ಸೋಂಕು ಹಬ್ಬುತ್ತಿರುವ ಬಗ್ಗೆ ರಾಜಸ್ಥಾನದ ಬಿಜೆಪಿ ಸಂಸದರಾದ ಪಿ ಪಿ ಚೌಧರಿ, ನಿಹಾಲ್ ಚಂದ್ ಮತ್ತು ದೇವಜಿ ಪಟೇಲ್ ಅವರು ಡಿಸೆಂಬರ್ 20ರಂದು ಪತ್ರವನ್ನು ಬರೆದು ಆತಂಕ ಹಂಚಿಕೊಂಡಿದ್ದಾರೆ
ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಶುಖ್ ಮಾಂಡವಿಯ ಅವರು ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೋವಿಡ್ನಿಂದ ರಾಜಸ್ಥಾನವನ್ನು ಮತ್ತು ದೇಶವನ್ನು ಕಾಪಾಡುವ ಸಲುವಾಗಿ ಎರಡು ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡುತ್ತಿದ್ದೇನೆ.
1. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಆಗಬೇಕು. ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಲಸಿಕೆ ಪಡೆದವರು ಮಾತ್ರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಈಗಾಗಲೇ ಯಾತ್ರೆಯಲ್ಲಿ ಪಾಲ್ಗೊಂಡವರನ್ನು ಐಸೋಲೇಟ್ ಮಾಡಬೇಕು.
2. ಒಂದು ವೇಳೆ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆ ಸಾಧ್ಯವಾಗದೇ ಇದ್ದಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಮಹಾಮಾರಿಯಿಂದ ದೇಶವನ್ನು ರಕ್ಷಿಸುವ ಸಲುವಾಗಿ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ
ಆರೋಗ್ಯ ಸಚಿವರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿ ಡಿಸೆಂಬರ್ 20ರಂದೇ ಪತ್ರ ಬರೆದಿದ್ದಾರೆ.