ಆರ್ಎಸ್ಎಸ್ ಮತ್ತು ಬ್ರಾಹ್ಮಣರ ಸಿದ್ಧಾಂತವನ್ನು ಪಠ್ಯಪುಸ್ತಕ ಮೂಲಕ ಶಾಲಾ ಮಕ್ಕಳ ಮೇಲೆ ಹೇರಲು ಹೊರಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗ ಟೀಕೆ ಕೇಳಿಬಂದಿರುವ ಬೆನ್ನಲ್ಲೇ ಈಗ 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಸುಳ್ಳು ಹೇಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
`ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಸುಳ್ಳು. ಅವರು `ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಿವೆ. ಆದ್ದರಿಂದ ತಕ್ಷಣವೇ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದೇ ಇದ್ದರೆ ನಾಡಿನಾದ್ಯಂತ ಹೋರಾಟ ಮಾಡುವುದು ಅನಿವಾರ್ಯ ಆಗಬಹುದು’
ಎಂದು ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.