ವೆಸ್ಟ್ ಇಂಡೀಸ್ ವಿರುದ್ಧದ 5 ಟಿ-20 ಸರಣಿಗೆ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಈ ತಂಡದಿಂದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಬುಮ್ರಾ ಅವರನ್ನು ಹೊರಗಿಡಲಾಗಿದೆ.
ಇದೇ ಜುಲೈ 29 ರಿಂದ ಅಗಸ್ಟ್ 7 ರ ವರೆಗೆ ವೆಸ್ಟ್ ಇಂಡೀಸ್ನಲ್ಲಿ ಭಾರತ ತಂಡ ಕೆರೆಬಿಯನ್ನರನ್ನು 3 ಏಕದಿನ ಹಾಗೂ 5 ಟಿ-20 ಪಂದ್ಯಗಳಲ್ಲಿ ಎದುರಿಸಲಿದೆ.
ಏಕದಿನ ಹಾಗೂ ಟಿ-20 ಪಂದ್ಯಗಳಿಗೆ ಈಗಾಗಲೇ ಬಿಸಿಸಿಐ ತಂಡಗಳನ್ನು ಪ್ರಕಟಿಸಿದೆ.
ವೆಸ್ಟ್ ಇಂಡೀಸ್ ಸರಣಿಗೆ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿಯವರನ್ನು ಬಿಸಿಸಿಐ ಹೊರಗಿಟ್ಟು, ವಿಶ್ರಾಂತಿ ನೀಡಿದೆ. ಇವರ ಜೊತೆಗೆ ಬೌಲರ್ ಜಸ್ಪ್ರಿತ್ ಬುಮ್ರಾರನ್ನು ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗಿಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ಉತ್ತಮವಾಗಿರಲಿಲ್ಲ. ಅಲ್ಲದೇ, ಅವರು ಸಾಮಾನ್ಯ ತೊಡೆಸಂಧು ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣದಿಂದಾಗಿ ಇವರನ್ನು ವೆಸ್ಟ್ ಇಂಡೀಸ್ ಸರಣಿಯಿಂದ ಕೈಬಿಡಲಾಗಿದೆ.
ಅಲ್ಲದೇ, ನವೆಂಬರ್ ತಿಂಗಳಲ್ಲಿ ಟಿ-20 ವಿಶ್ವಕಪ್ ಇದೆ. ಈ ತಂಡದಲ್ಲಿ ಆಡಲು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎನ್ನಲಾಗುತ್ತಿದೆ.
ಇನ್ನು, ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಮಿಂಚಿರುವ ಜಸ್ಪ್ರಿತ್ ಬುಮ್ರಾ ಅವರಿಗೂ ವಿಶ್ರಾಂತಿ ನೀಡಲಾಗಿದೆ.
ವೆಸ್ಟ್ ಇಂಡಿಸ್ ವಿರುದ್ಧದ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.