ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಯತೀಂದ್ರ ಅವರಿಗೆ ಧನ್ಯವಾದ – ಟಬುರಾವ್​

ಬೆಂಗಳೂರು ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್​ ಗುಂಡೂರಾವ್​ ಅವರಿಗೆ ಈ ಬಾರಿಯೂ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದೆ.

ದಿನೇಶ್​ ಗುಂಡೂರಾವ್​ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಅವರ ಪತ್ನಿ ಟಬು ರಾವ್​ ಅವರು ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ಮತ್ತು ನಮಗೆ ಕುಟುಂಬದಂತಿರುವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಎಂದು ಟಬು ಅವರು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ನಮಗೆ ಪ್ರೀತಿಪಾತ್ರರಾಗಿರುವ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸುರ್ಜೆವಾಲಾ ಮತ್ತು ಕೆಟ್ಟ ಗಳಿಗೆಯಲ್ಲಿ ನಮಗೆ ಮಾರ್ಗದರ್ಶನ ನೀಡಿದ ಮತ್ತು ನಮ್ಮ ಜೊತೆಗೆ ನಿಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್​ ಅವರಿಗೂ ಧನ್ಯವಾದಗಳು 

ಎಂದು ಟಬು ರಾವ್​ ಅವರು ಬರೆದುಕೊಂಡಿದ್ದಾರೆ.