16ನೇ ಐಪಿಎಲ್ ಸರಣಿಗೆ ದಿನಾಂಕ ಘೋಷಣೆ ಆಗಿದೆ.
ಮಾರ್ಚ್ 31ರಿಂದ ಟಾಟಾ ಐಪಿಎಲ್ ಪಂದ್ಯಾವಳಿ ಆರಂಭ ಆಗಲಿದೆ.
ಉದ್ಘಾಟನಾ ಪಂದ್ಯ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ ನಡುವೆ ಅಹಮದಾಬಾದ್ನಲ್ಲಿರುವ ವಿಶ್ವದ ಅತೀ ದೊಡ್ಡ ಸ್ಟೇಡಿಯಂ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 31ರಂದು ನಡೆಯಲಿದೆ.
18 ದಿನಗಳಲ್ಲಿ ಎರಡೆರಡು ಪಂದ್ಯಗಳು ನಡೆಯಲಿದೆ. ಏಪ್ರಿಲ್ 1ರಂದು ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ, ಲಕ್ನೋ ಸೂಪರ್ ಗೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ.
ಒಟ್ಟು 52 ದಿನ 12 ನಗರಗಳಲ್ಲಿ 70 ಲೀಗ್ ಪಂದ್ಯಗಳು ನಡೆಯಲಿವೆ.
ಮೇ 21ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ.