Teachers Recruitment : ರಾಜ್ಯದಲ್ಲಿ 45,565 ಶಿಕ್ಷಕರ ಹುದ್ದೆಗಳು ಖಾಲಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Teachers Recruitment

ರಾಜ್ಯದಲ್ಲಿ 45,565 ಶಿಕ್ಷಕರ ಹುದ್ದೆ ಖಾಲಿಯಿದ್ದು, ಈಗಾಗಲೇ 15 ಸಾವಿರ ಶಿಕ್ಷಕರ ಕಾಯಂ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್‌ 6ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್​​ ತಿಂಗಳಲ್ಲಿ ಮತ್ತೆ ಹೊಸ ನೇಮಕಾತಿ (Teachers Recruitment) ಮಾಡಲಾಗುವುದು. ಅಲ್ಲಿಯವರೆಗೆ ಅತಿಥಿ ಶಿಕ್ಷಕರ ಮೂಲಕ ನಿಭಾಯಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ (Minister BC Nagesh) ಹೇಳಿದ್ದಾರೆ.

ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ಬಿ. ಶಿವಣ್ಣ, ನಂಜೇಗೌಡ, ಬಿಜೆಪಿಯ ರಾಜುಗೌಡ ಪ್ರಶ್ನೆಗಳಿಗೆ ಉತ್ತರಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿದರು. ರಾಜ್ಯದಲ್ಲಿ 45,565 ಹುದ್ದೆಗಳು ಖಾಲಿ ಇದ್ದರೆ, ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲೇ 18,477 ಹುದ್ದೆ ಖಾಲಿಯಿವೆ. ರಾಜ್ಯದಲ್ಲಿ ಪ್ರತಿ 16 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರಿದ್ದರೆ, ಕಲ್ಯಾಣ ಕರ್ನಾಟಕದಲ್ಲಿ ಪ್ರತಿ 25 ವಿದ್ಯಾರ್ಥಿಗಳಿಗೆ ಒಬ್ಬರಂತೆ ಶಿಕ್ಷಕರು ಇದ್ದಾರೆ ಎಂದು ಹೇಳಿದ್ದಾರೆ.  ಇದನ್ನೂ ಓದಿ : 15 ಸಾವಿರ ಶಿಕ್ಷಕರ ನೇಮಕಾತಿ : ಪರೀಕ್ಷಾ ದಿನಾಂಕ ಪ್ರಕಟ

ಈ ಶಿಕ್ಷಕರ ಕೊರತೆ ತಾತ್ಕಾಲಿಕವಾಗಿ ನೀಗಿಸಲು ಪ್ರಾಥಮಿಕ ಶಾಲೆಗಳಿಗೆ 27 ಸಾವಿರ, ಪ್ರೌಢ ಶಾಲೆಗಳಿಗೆ 5,159 ಸೇರಿದಂತೆ 32,159 ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಜತೆಗೆ 15 ಸಾವಿರ ಕಾಯಂ ಶಿಕ್ಷಕರ ನೇಮಕಾತಿಗೆ (Teachers Recruitment) ಅಧಿಸೂಚನೆ ಹೊರಡಿಸಿದ್ದು, 12-13 ಸಾವಿರ ಶಿಕ್ಷಕರ ನೇಮಕವಾಗುವ ನಿರೀಕ್ಷೆಯಿದೆ. ಹೊಸ ಅಭ್ಯರ್ಥಿಗಳಿಗೂ ಅವಕಾಶ ಸಿಗುವಂತೆ ಮಾಡಲು ನ.6 ರಂದು ಟಿಇಟಿ ನಡೆಸಿ ಮುಂದಿನ ವರ್ಷದ ಫೆಬ್ರುವರಿ-ಮಾರ್ಚ್​​ನಲ್ಲಿ ಮತ್ತೆ ನೇಮಕಾತಿ ನಡೆಸಲಾಗುವುದು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

ಬಿಜೆಪಿ ಶಾಸಕ ರಾಜುಗೌಡ ಅವರು ಮಾತನಾಡಿ, ನಮ್ಮ ಕ್ಷೇತ್ರದಲ್ಲಿ 45,550 ವಿದ್ಯಾರ್ಥಿಗಳಿದ್ದು, ಪ್ರತಿ 80 ವಿದ್ಯಾರ್ಥಿಗಳಿಗೆ ಒಬ್ಬರಂತೆಯೂ ಶಿಕ್ಷಕರಿಲ್ಲ. ಹೀಗಾದರೆ ಬೇರೆ ಭಾಗದ ಮಕ್ಕಳೊಂದಿಗೆ ನಮ್ಮ ಮಕ್ಕಳು ಹೇಗೆ ಸ್ಪರ್ಧಿಸಲು ಸಾಧ್ಯ? ಎಂದು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here