ಶಿಕ್ಷಕರ ನೇಮಕಾತಿ ಹಗರಣಕ್ಕೆ (Teachers Recruitment Scam) ಸಂಬಂಧಿಸಿದಂತೆ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ 10 ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಅಕ್ರಮ ಮಾರ್ಗಗಳ ಮೂಲಕ ಉದ್ಯೋಗ ಪಡೆದ ಆರೋಪದ ಮೇಲೆ ಸಿಐಡಿ ಪೊಲೀಸರು ಸೆಪ್ಟೆಂಬರ್ 6 ರಂದು ಶಿಕ್ಷಕರನ್ನು ಬಂಧಿಸಿದ್ದರು. ಡಿಡಿಪಿಐ ಸಿ.ನಂಜಯ್ಯ ಅವರು ಬಂಧನದ ದಿನಾಂಕಕ್ಕೆ ಅನ್ವಯವಾಗುವಂತೆ ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.
2012-14ರ ನಡುವೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ (Teachers Recruitment Scam) ಎಂಬ ಆರೋಪದ ಹಿನ್ನೆಲೆಯಲ್ಲಿ, ಸಿಐಡಿ ಅಧಿಕಾರಿಗಳು ಕಳೆದ ತಿಂಗಳು ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ, ಕಳಂಕಿತ ಶಿಕ್ಷಕರು ಕೆಲಸ ಮಾಡುತ್ತಿದ್ದ ಶಾಲೆಗಳಿಗೆ ಭೇಟಿ ನೀಡಿ ಅವರನ್ನು ಬಂಧಿಸಿದ್ದರು.
ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಸಿಐಡಿ ಅಧಿಕಾರಿಗಳು ಕಳಂಕಿತ ಶಿಕ್ಷಕರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : `ರೈಲ್ವೆ, ಸೇನಾ ನೇಮಕಾತಿ – ಯುವಜನರು ಎಷ್ಟು ದಿನ ತಾಳ್ಮೆಯಿಂದ ಇರಬೇಕು’ ಮೋದಿ ಸರ್ಕಾರಕ್ಕೆ ಮತ್ತೆ ಮೊಟಕಿದ ಸಂಸದ ವರುಣ್ ಗಾಂಧಿ