ಈ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ : ಬಿ.ಸಿ.ನಾಗೇಶ್

ಭಗವದ್ಗೀತೆ ಭೋದನೆ

ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಹೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಭಗವದ್ಗೀತೆ ಬೋಧನೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು.

ಎಂ.ಕೆ.ಪ್ರಾಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವರು, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಸ್ವಾಗತಿಸುತ್ತೇನೆ – ಡಿಕೆ ಶಿವಕುಮಾರ್

LEAVE A REPLY

Please enter your comment!
Please enter your name here