ಕೊಹ್ಲಿ ಆಡಲ್ಲ, ರೋಹಿತ್ ನಾಯಕ – ನಾಲ್ಕು ಹೊಸ ಮುಖಗಳಿಗೆ ಮಣೆ..!

ನ್ಯೂಜಿಲೆಂಡ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾಗೆ ಟೀಂ ಇಂಡಿಯಾದ ನಾಯಕತ್ವ ವಹಿಸಲಾಗಿದೆ. ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತದಲ್ಲೇ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಟಿ-ಟ್ವೆಂಟಿ ಪಂದ್ಯಗಳ ಸರಣಿಗೆ ಕೆ ಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಘೋಷಿಸಲಾಗಿದೆ. ಟಿ-ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ಇಳಿದಿದ್ದ ಕೊಹ್ಲಿ ಈ ಸರಣಿಯಲ್ಲಿ ಆಡುತ್ತಿಲ್ಲ.

ನವೆಂಬರ್ 17ರಿಂದ ಟಿ-ಟ್ವೆಂಟಿ ಸರಣಿ ಆರಂಭ ಆಗಲಿದೆ. ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಗೆ ಮತ್ತೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಐಪಿಎಲ್ ಸರಣಿಯಲ್ಲಿ ಅತ್ಯಧಿಕ ರನ್ ಗಳಿಸಿದ್ದ ರುತುರಾಜ್ ಗಾಯಕವಾಡ್, ವೆಂಕಟೇಶ್ ಅಯ್ಯರ್ ಮತ್ತು ಅತ್ಯಧಿಕ ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್, ಅವೆಶ್ ಖಾನ್ ತಂಡದಲ್ಲಿ ಹೊಸ ಮುಖಗಳಾಗಿ ಸೇರ್ಪಡೆಯಾಗಿದ್ದಾರೆ.

ಟೀಂ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ರುತುರಾಜ್ ಗಾಯಕವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶಾನ್, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ.

LEAVE A REPLY

Please enter your comment!
Please enter your name here