Bengaluru – ಮಳೆ ಅಬ್ಬರದ ಬಳಿಕ ಈಗ ಭೀಕರ ಚಳಿ

ರಾಜ್ಯದಲ್ಲಿ ಮಳೆಯ ಅಬ್ಬರದ ನಂತರ ಭೀಕರ ಚಳಿ ಶುರುವಾಗಿದೆ.

ಬೆಂಗಳೂರಿನಲ್ಲಿಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿದೆ. ಇದು ವಾಡಿಕೆಗಿಂತ 3.9 ಡಿಗ್ರಿ ಸೆಲ್ಶಿಯಸ್‌ ಕಡಿಮೆ ತಾಪಮಾನ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಇದು, ಕಳೆದ ಹತ್ತು ವರ್ಷದಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲಾದ ಕನಿಷ್ಠ ತಾಪಮಾನ ಎಂದು ಹೇಳಿದೆ.

ಕಳೆದ 10 ವರ್ಷಗಳ ಅವಧಿಯಲ್ಲಿ 2018ರ ಅಕ್ಟೋಬರ್‌ 30ರಂದು 16.6 ಡಿಗ್ರಿ  ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು.

1974 ರ ಅಕ್ಟೋಬರ್‌ 31 ರಂದು 13.2 ಡಿಗ್ರಿ ಸೆಲ್ಶಿ ಯಸ್‌ ತಾಪಮಾನ ದಾಖಲಾಗಿತ್ತು. ಇದೇ ಈವರೆಗಿನ ಕನಿಷ್ಠ ತಾಪಮಾನವಾಗಿದೆ.

ಬೆಂಗಳೂರು ಮಾತ್ರವಲ್ಲದೇ ಬಹುತೇಕ ಜಿಲ್ಲೆಗಳ ತಾಪಮಾನದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ರಾಜ್ಯದ ಶೇ.73ರಷ್ಟುಭೂ ಭಾಗದಲ್ಲಿ 12 ಡಿಗ್ರಿ ಸೆಲ್ಶಿಯಸ್‌ನಿಂದ 16 ಡಿಗ್ರಿ ಸೆಲ್ಶಿಯಸ್‌ ತನಕ ಕನಿಷ್ಠ ತಾಪಮಾನ ದಾಖಲಾಗಿದೆ.

ಆದರೆ,  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,  ಮಂಡ್ಯ, ಮಡಿಕೇರಿ, ಮೈಸೂರು ಜಿಲ್ಲೆಯಲ್ಲಿ ಮಾತ್ರ ತಾಪಮಾನ ಸ್ವಲ್ಪ ಹೆಚ್ಚಿದೆ.