ಪಠ್ಯ ಪುಸ್ತಕ ಪರಿಷ್ಕರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡಿದೆ.
ದಾಮೋದರ ಸಾವರ್ಕರ್, ಆರ್ಎಸ್ಎಸ್ ಸಂಸ್ಥಾಪಕ ಹೆಗ್ಡೇವಾರ್ ಮತ್ತು ಚಕ್ರವರ್ತಿ ಸೂಲಿಬೆಲೆ ಲೇಖನಗಳನ್ನು ಪಠ್ಯಪುಸ್ತಕದಿಂದ ತೆಗೆದುಹಾಕಲು ಇವತ್ತು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಪೂರಕ ಪಠ್ಯಪುಸ್ತಕ ಪೂರೈಸಲು ತೀರ್ಮಾನಿಸಲಾಗಿದೆ.
ಪೂರ್ಣ ಪ್ರಮಾಣದ ಪಠ್ಯ ಪುಸ್ತಕ ಪರಿಷ್ಕರಣೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಬಾರಿ ಹೊಸದಾಗಿ ಪಠ್ಯ ಪುಸ್ತಕಗಳನ್ನು ಮುದ್ರಣ ಮಾಡಲ್ಲ, ಬದಲಿಗೆ ಪೂರಕ ಪಠ್ಯಗಳ ಪುಸ್ತಕವನ್ನು ಶಾಲೆಗಳಿಗೆ ರವಾನಿಸಲಾಗಿದೆ.
ADVERTISEMENT
ADVERTISEMENT