‘ವೈರಲ್ ಆಡಿಯೋ ನನ್ನದೇ’ ಎಂದ ಬಿಜೆಪಿ ಶಾಸಕ

BJP
BJP

ವೈರಲ್ ಆಗಿರುವ ಆಡಿಯೋದಲ್ಲಿ ಇರುವ ಧ್ವನಿ ನನ್ನದೇ ಎಂದು ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸಗೂರ (Basavaraj Dadesuguru) ಪ್ರತಿಕ್ರಿಯಿಸಿದರು.

ಮಾಧ್ಯಮಗಳಿಗೆ ಕೊಪ್ಪಳದಲ್ಲಿ ಇಂದು ಪ್ರತಿಕ್ರಿಯಿಸಿ ಮಾತನಾಡಿರುವ ಅವರು, ಆಡಿಯೋದಲ್ಲಿರುವ ಧ್ವನಿ ನನ್ನದೇ. ಆದರೆ, ನಾನು ಹಣ ಪಡೆದಿಲ್ಲ. ಬೇರೆ ಇಬ್ಬರ ‌ನಡುವೆ ಜಗಳ ಉಂಟಾಗಿತ್ತು. ಅದನ್ನು ಪರಿಹರಿಸುವಂತೆ ನನ್ನ ಬಳಿ‌ಬಂದಿದ್ದರು. ಅವರಿಬ್ಬರನ್ನೂ ಒಟ್ಟುಗೂಡಿಸಿ‌ ರಾಜಿ ಪಂಚಾಯಿತಿ ನಡೆಸಿದ್ದೆ ಅದೇ ಸಂಭಾಷಣೆಯನ್ನು ವೈರಲ್ ಮಾಡಿದ್ದಾರೆ ಎಂದು ಹೇಳಿದರು.

ಚುನಾವಣಾ ವರ್ಷವಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಹೀಗಾಗಿ ಆಡಿಯೊ, ವಿಡಿಯೋ ವೈರಲ್ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಇದೇ ವೇಳೆ ಮಾಡಿದರು.

ಇದನ್ನೂ ಓದಿ : PSI ನೇಮಕಾತಿ ಹಗರಣ: BJP ಶಾಸಕರ ಆಡಿಯೋ ಬಹಿರಂಗ

ಪಿಎಸ್ಐ‌ ನೇಮಕಾತಿ ಮಾಡಿಸಿಕೊಡುವುದಾಗಿ‌ ಹೇಳಿ ವ್ಯಕ್ತಿಯೊಬ್ಬರಿಂದ 15 ಲಕ್ಷ ರೂ. ಪಡೆದ ಬಗ್ಗೆ ಶಾಸಕ ಬಸವರಾಜ ದಢೇಸಗೂರ ಮೇಲೆ ಆರೋಪ ಕೇಳಿಬಂದಿದೆ. ಈ ಕುರಿತು ಶಾಸಕ ಬಸವರಾಜ ದಡೇಸುಗೂರು (Basavaraj Dadesuguru) ಅವರ ಆಡಿಯೋ ಇಂದು ವೈರಲ್ ಆಗಿದೆ.

ಇದನ್ನೂ ಓದಿ : ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಬಿಜೆಪಿಗರಿಂದ ಆಕ್ಷೇಪ

LEAVE A REPLY

Please enter your comment!
Please enter your name here