ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರಾಗಿದೆ. ಕಿಶೋರ್ ಹೈಬಿಪಿಯಿಂದ ಕೋಮಾಗೆ ಹೋಗಿದ್ದಾರೆ.
ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಅಪ್ಪು ಅಭಿಮಾನಿ ಕಿಶೋರ್ ಪತ್ತಿಕೊಂಡ ಅವರಿಗೆ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿಶೋರ್ ಪತ್ತಿಕೊಂಡ ಅನಾರೋಗ್ಯದ ಅಪೊಲೋ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ.
ಕಿಶೋರ್ ಪತ್ತಿಕೊಂಡ ಜೇಮ್ಸ್ ಸಿನಿಮಾ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ . ಅಪ್ಪು ನಿಧನದ ಬಳಿಕ ಈ ಸಿನಿಮಾ ರಿಲೀಸ್ ಆಗಿತ್ತು. ನಿರ್ದೇಶಕ ಚೇತನ್ ಕುಮಾರ್ ಸಾರಥ್ಯದಲ್ಲಿ ಬಂದ ಜೇಮ್ಸ್ 2022 ಮಾರ್ಚ್ 17ರಂದು ತೆರೆಗೆ ಬಂದಿತ್ತು.