ಉತ್ತರ ಪ್ರದೇಶದ ಲಖನೌನಲ್ಲಿ ಜೈಲು ಅಧಿಕಾರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯವರಿಗೆ (Mukthar Ansari) ನ್ಯಾಯಾಲಯ 2 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಈ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.
2003ರಲ್ಲಿ ಜೈಲಿನಲ್ಲಿದ್ದ ಅನ್ಸಾರಿ ಭೇಟಿಗೆ ಬಂದಿದ್ದ ಜನರನ್ನು ತಪಾಸಣೆ ನಡೆಸಿ ಬಿಡುವಂತೆ ಸೂಚನೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಮುಖ್ತಾರ್ ಅನ್ಸಾರಿಯವರು ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದರು ಎಂದು ಜೈಲು ಅಧಿಕಾರಿ ಎಸ್.ಕೆ.ಅಶ್ವಥ್ಇಯವರು ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ
ವಿಚಾರಣಾಧೀನ ನ್ಯಾಯಾಲಯ ಅನ್ಸಾರಿಯವರನ್ನು (Mukthar Ansari) ಈ ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಆದರೆ, ಉತ್ತರ ಪ್ರದೇಶದ ಸರ್ಕಾರ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸರ್ಜಿ ಸಲ್ಲಿಸಿತ್ತು.
ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿಯಾಗಿರುವ ಮುಖ್ತರ್ ಅಬ್ಬಾಸ್ ನಖ್ವಿ ಉತ್ತರ ಪ್ರದೇಶದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರು ತಂದೆ ಮುಖ್ತರ್ ಅಹ್ಮದ್ ಅನ್ಸಾರಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ, ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಿಯಾಶೀಲರಾಗಿದ್ದ ಇವರು ಮುಸ್ಲಿಂ ಲೀಗ್ನ ನೇತೃತ್ವವನ್ನು ವಹಿಸಿಕೊಂಡಿದ್ದರು. ಇದನ್ನೂ ಓದಿ : Breaking News : ದಲಿತ ಶಾಸಕ ಜಿಗ್ನೇಶ್ ಮೇವಾನಿ ಸೇರಿ 18 ಜನರಿಗೆ ಜೈಲು ಶಿಕ್ಷೆ