ಕನ್ನಡದ ಖ್ಯಾತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ತನ್ನ ಮೊದಲ ಘಟಿಕೋತ್ಸವದ ಗೌರವ ಡಾಕ್ಟರೇಟ್ ಘೋಷಿಸಿದೆ.
ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರಧಾನ ಸಮಾರಂಭ ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಮೊದಲ ಘಟಿಕೋತ್ಸವ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ರ್ಯಾಂಕ್ ಪಡೆದಿರುವ 41 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ.