ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ಇದನ್ನೂ ಓದಿ : ಮಳೆಯಿಂದ ಬೆಂಗಳೂರು ಅಸ್ತವ್ಯಸ್ತ : ಸರ್ಕಾರದ ಸಮರ್ಥನೆ ಮಾಡಿಕೊಂಡ ಸಚಿವ ಸುಧಾಕರ್

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅಕ್ಟೋಬರ್‌ 2ರ ವರೆಗೂ ಮಳೆಯಾಗಬಹುದು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ವೈಪರೀತ್ಯಗಳ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಉತ್ತರ ಪ್ರದೇಶ : ತೀವ್ರ ಮಳೆಗೆ 13 ಜನ ಸಾವು; ಶಾಲೆಗಳಿಗೆ ರಜೆ