ಪಶ್ಚಿಮ ಬಂಗಾಳದಲ್ಲಿ ಅಸನ್ ಸೋಲ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಟಿಎಂಸಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಬಿಜೆಪಿಯಲ್ಲಿದ್ದ ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಶತ್ರುಘ್ನ ಸಿನ್ಹಾ ಅವರಿಗೆ ಮಮತಾ ಬ್ಯಾನರ್ಜಿ ಟಿಕೆಟ್ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಅಸನ್ ಸೋಲ್ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಾಬುಲ್ ಸುಪ್ರಿಯೋ ಸಂಸದರಾಗಿ ಆಯ್ಕೆ ಆಗಿದ್ದರು. ಆದರೆ 2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಫಲಿತಾಂಶ ಬಂದ ಬಳಿಕ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಇವರು ಪ್ರಧಾನಿ ಮೋದಿ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದರು.
ಬಾಬುಲ್ ಸುಪ್ರಿಯೋಗೆ ಬಾಲಿಗುಂಗೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಎಂಸಿ ಟಿಕೆಟ್ ನೀಡಿದೆ.