ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿ ಇವತ್ತು ರಾತ್ರಿಯೇ ರೇವಂತ್ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ರೇವಂತ್ ರೆಡ್ಡಿ ಆಯ್ಕೆ ಬಗ್ಗೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೆಲವೇ ಹೊತ್ತಿನಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಹೈದರಾಬಾದ್ನಲ್ಲಿರುವ ರಾಜಭವನದಲ್ಲಿ ಇವತ್ತೇ ರೇವಂತ್ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.