ಸೆಲೆಬ್ರಿಟಿ ಫ್ಯಾಶನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಶನಿವಾರ ತೆಲಂಗಾಣದ ಹೈದರಾಬಾದ್ನಲ್ಲಿರುವ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರತ್ಯುಷಾ ಗರಿಮೆಲ್ಲ ಎಂಬ ಹೆಸರಿನ ತನ್ನದೇ ಲೇಬಲ್ನ ಸಂಸ್ಥಾಪಕಿಯಾಗಿದ್ದ ಪ್ರತ್ಯುಷಾ, ಬಂಜಾರಾ ಹಿಲ್ಸ್ನಲ್ಲಿ ಫ್ಯಾಶನ್ ಸ್ಟುಡಿಯೋವನ್ನು ನಡೆಸುತ್ತಿದ್ದರು ಮತ್ತು ಟಾಲಿವುಡ್, ಬಾಲಿವುಡ್ ಮತ್ತು ಇತರ ಕ್ಷೇತ್ರಗಳ ಟಾಪ್ ಕ್ಲೈಂಟ್ಗಳನ್ನು ಹೊಂದಿದ್ದರು.
ಸ್ನಾನಗೃಹದಲ್ಲಿ ಪ್ರತ್ಯುಷಾ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬಂಜಾರಾ ಹಿಲ್ಸ್ನ ಸರ್ಕಲ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಪ್ರತ್ಯುಷಾ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರತ್ಯುಷಾ ಬೆಡ್ರೂಂನಿಂದ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಜಾರ ಹಿಲ್ಸ್ನಲ್ಲಿ ಅನುಮಾನಾಸ್ಪದ ಸಾವು ಪ್ರಕರಣದಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗುವುದು.
ಯುಕೆಯಲ್ಲಿ ಫ್ಯಾಷನ್ ಡಿಸೈನಿಂಗ್ ಸ್ನಾತಕೋತ್ತರ ಪದವಿ ಪಡೆದಿದ್ದ ಪ್ರತ್ಯುಷಾ ತಂದೆಯ ಎಲ್ಇಡಿ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದಳು. ಆದರೆ, ಕಳೆದ ವರ್ಷವಷ್ಟೇ ತನ್ನ ಆಸಕ್ತಿಯ ಕ್ಷೇತ್ರ ಫ್ಯಾಷನ್ ಡಿಸೈನಿಂಗ್ ಕಡೆ ಹೋಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇನ್ನು, ಕಳೆದ ಕೆಲ ದಿನಗಳ ಹಿಂದೆ ಕಲ್ಕಾತ್ತಾದಲ್ಲಿ ಮಾಡೆಲಿಂಗ್ ಹಾಗೂ ಫ್ಯಾಷನ್ ಡಿಸೈನಿಂಗ್ ಕ್ಷೇತ್ರದ ಯುವತಿಯರ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು.