ADVERTISEMENT
ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಪದವಿ ವಿದ್ಯಾರ್ಥಿಗಳಿಂದ 6 ತಿಂಗಳ C-DAC ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಬಿಇ, ಬಿಟೆಕ್, ಬಿಎಸ್ಸಿ ಮತ್ತು ಬಿಸಿಎ ಆದ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
6 ತಿಂಗಳ ತರಬೇತಿ ವೇಳೆ ಪ್ರತಿ ತಿಂಗಳಿಗೆ 10 ಸಾವಿರ ರೂಪಾಯಿಯಂತೆ ತರಬೇತಿ ವೇತನವನ್ನೂ ನೀಡಲಾಗುತ್ತದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಈಗಾಗಲೇ ವ್ಯಾಸಂಗ ಮುಗಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ADVERTISEMENT