ಇದೇ ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಎನ್ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯದ ಮಹಿಳೆಯಾಗಿರುವುದರಿಂದ ಅವರಿಗೆ ಬಂಬಲ ನೀಡಬೇಕು ಎಂದು ಶಿವಸೇನಾ ಬಣದ 16 ಜನ ಶಾಸಕರು ಉದ್ದವ್ ಠಾಕ್ರೆ ಅವರಿಗೆ ಹೇಳಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಅವರು, ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದರೆ ಬಿಜೆಪಿ ಬೆಂಬಲಿಸಿದಂತಲ್ಲ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಜನ ಶಿವಸೇನಾ ನಾಯಕರು ಉದ್ದವ್ ಠಾಕ್ರೆಯವರಿಗೆ ವಮಾ ವಿಕಾಸ್ ಅಘಾಡಿ ಸರ್ಕಾರ ತೊರೆದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಆದರೆ, ಉದ್ದವ್ ಠಾಕ್ರೆಯವರು ತಮ್ಮ ನಿರ್ಧಾರವನ್ನು ಬದಲಿಸಲಿಲ್ಲ.
ಏಕನಾಥ್ ಶಿಂಧೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ತೊರೆದು ಇದೀಗ ಬಿಜೆಪಿಯೊಂದಿ ಮೈತ್ರಿ ಸರ್ಕಾರ ನಡೆಸುತ್ತಿದೆ. ಶಿವಸೇನೆಯ ರೆಬೆಲ್ ಶಾಸಕ ಏಕನಾಥ್ ಶಿಂಧೆಯವರನ್ನು ಬಿಜೆಪಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ.