ಕಾಂಗ್ರೆಸ್​​ ಸಚಿವರನ್ನು ಭೇಟಿಯಾದ ಉಡುಪಿ ಕೃಷ್ಣ ಮಠದ ಸ್ವಾಮೀಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ಉಡುಪಿ ಕೃಷ್ಣ ಮಠದ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಇಬ್ಬರು ಕಾಂಗ್ರೆಸ್​ ಸಚಿವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​ ಅವರನ್ನು ಸ್ವಾಮೀಜಿಯವರು ಭೇಟಿಯಾಗಿ ಆರ್ಶೀವದಿಸಿದ್ದಾರೆ.
ಈ ಬಗ್ಗೆ ಸ್ವತಃ ದಿನೇಶ್​ ಗುಂಡೂರಾವ್​ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಉಡುಪಿ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿರವರು ಇಂದು ನಮ್ಮ ನಿವಾಸಕ್ಕೆ ಭೇಟಿ ನೀಡಿದರು. ಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ,ಫಲತಾಂಬೂಲ ನೀಡಿ ಸನ್ಮಾನಿಸಿದೆ
ಎಂದು ಟ್ವೀಟಿಸಿದ್ದಾರೆ.
ಇನ್ನು ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್​ ನಿವಾಸಕ್ಕೆ ಭೇಟಿ ನೀಡಿ ಆರ್ಶೀವದಿಸಿದ್ದಾರೆ.
ಪರಮೇಶ್ವರ್​ ದಂಪತಿ ಫಲ ತಾಂಬೂಲ ನೀಡಿ ಸ್ವಾಮೀಜಿ ಸನ್ಮಾನಿಸಿದ್ದಾರೆ.