ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನಾಳೆಯೂ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.
ಆದರೆ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಇರಲ್ಲ.
ಇತ್ತ ಕೊಡಗು ಜಿಲ್ಲೆಯಲ್ಲೂ ನಾಳೆ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಲಾಗಿದೆ.
ADVERTISEMENT
ADVERTISEMENT