No Result
View All Result
ಆಗುಂಬೆ ಘಾಟಿಯ 6,7 ಮತ್ತು 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕು ಮತ್ತು ಅಲ್ಲಲ್ಲಿ ರಸ್ತೆ ಕುಸಿತವಾಗಿರುವ ಕಾರಣ ತೀರ್ಥಹಳ್ಳಿ-ಉಡುಪಿ ಮತ್ತು ಉಡುಪಿ-ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ.
ಇವತ್ತಿನಿಂದ ಅಂದರೆ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ನಿಷೇಧ ಹೇರಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ತೀರ್ಥಹಳ್ಳಿ-ಉಡುಪಿ ನಡುವೆ ಹೋಗುವವರು ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ ಮಾರ್ಗದ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ತೀರ್ಥಹಳ್ಳಿ-ಉಡುಪಿ ನಡುವೆ ಹೋಗುವವರು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದಲ್ಲಿ (2ನೇ ಪರ್ಯಾಯ ಮಾರ್ಗ)ದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
No Result
View All Result
error: Content is protected !!