ಇವತ್ತಿನಿಂದ ರಾಜ್ಯದಲ್ಲಿ ಮೊದಲ ಹಂತದ ಅನ್‌ಲಾಕ್

ಇವತ್ತು ಬೆಳಗ್ಗೆ 6 ಗಂಟೆಯಿAದ ರಾಜ್ಯದ 19 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್‌ಲಾಕ್ ಆರಂಭ ಆಗಿದೆ.

ಅನ್‌ಲಾಕ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿಗೆ ಬೇರೆ ಜಿಲ್ಲೆಗಳು ಮತ್ತು ಬೇರೆ ರಾಜ್ಯಗಳಿಂದ ಸ್ವಂತ ವಾಹನಗಳಲ್ಲಿ ಜನ ವಾಪಸ್ ಆಗುತ್ತಿದ್ದಾರೆ.

ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೂ ಲಾಕ್‌ಡೌನ್ ವಿಸ್ತರಣೆ ಆಗಿದೆ.

ಅಂತರ್ ಜಿಲ್ಲೆ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಯಾವುದೇ ನಿರ್ಬಂಧ ಇರುವುದಿಲ್ಲ.

ದಕ್ಷಿಣ ಕನ್ನಡ, ದಾವಣೆಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು, ಕೊಡಗು,ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 21ರವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದೆ.

ಅನ್‌ಲಾಕ್ ಆದರೂ ಇವತ್ತಿನಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಒಳಗೊಂಡು ಬಸ್ ಸಂಚಾರಕ್ಕೆ ಅವಕಾಶ ಇಲ್ಲ. ಜೂನ್ 21ರ ಬಳಿಕವಷ್ಟೇ ಬಸ್ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಎಲ್ಲ ಕೈಗಾರಿಕೆಗಳಿಗೆ ಶೇಕಡಾ 50ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‌ಡೌನ್ ಮುಂದುವರಿಯಲಿದೆ. ಅಗತ್ಯ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ಗಾರ್ಮೆಂಟ್ಸ್ಗಳಿಗೆ ಶೇಕಡಾ 30ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ. ಕಟ್ಟಡ ಕಾಮಗಾರಿಗೆ ಅವಕಾಶ ನೀಡಲಾಗಿದೆ. ಕಟ್ಟಡ ಕಾಮಗಾರಿಗೆ ಸಂಬAಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಪಾರ್ಕ್ಗಳನ್ನು ತೆರೆಯಲು ಬೆಳಗ್ಗೆ 5 ಗಂಟೆಯಿAದ 10 ಗಂಟೆವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಕ್ಕೆ ಮಧ್ಯಾಹ್ನ 2 ಗಂಟೆವವರೆಗೆ ಅವಕಾಶ ನೀಡಲಾಗಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರ ಪ್ರಯಾಣಕ್ಕಷ್ಟೇ ಅವಕಾಶ ನೀಡಲಾಗಿದೆ.

ನೈಟ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಜಾರಿಯಲ್ಲಿರಲಿದೆ.

 

LEAVE A REPLY

Please enter your comment!
Please enter your name here