ನಟ ಕಿಚ್ಚ ಸುದೀಪ್ ಅವರಿಗೆ ಅವಾಚ್ಯ ಹಾಗೂ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಅಹೋರಾತ್ರ ಹಾಗೂ ಚರಣ್ ಎನ್ನುವವರ ಮೇಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಗಳೂರು ಪೊಲೀಸ್ ಕಮೀಷನರ್ ಅವರಿಗೆ ದೂರು ಸಲ್ಲಿಕೆ ಮಾಡಿದೆ.
ಕೆಲ ದಿನಗಳ ಹಿಂದೆ ಅಹೋರಾತ್ರ ಹಾಗೂ ಚರಣ್ ಎನ್ನುವವರು ನಟ ಕಿಚ್ಚ ಸುದೀಪ್ ಅವರನ್ನು ವಿರೋಧಿಸಿ ಸಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇವರ ವಿರುದ್ಧವೂ ಕಿಚ್ಚ ಸುದೀಪ್ ಅಭಿಮಾನಿಗಳು ಮಾತನಾಡಿದ್ದಾರೆ. ಅಲ್ಲದೇ, ನಿರ್ದೇಶಕ ನಂದಕಿಶೋರ್ ಅವರು ಈ ಬಗ್ಗೆ ಮಾತನಾಡಿ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಇದೀಗ, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ನಟ ಸುದೀಪ್ ಪರವಾಗಿ ಬಂದಿದೆ.
ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಅಹೋರಾತ್ರ ಹಾಗೂ ಚರಣ್ ಎನ್ನುವವರು ನಟ ಕಿಚ್ಚ ಸುದೀಪ್ ಅವರ ಬಗ್ಗೆ ಅವಾಚ್ಯವಾಗಿ, ಅವಹೇಳನಕಾರಿಯಾಗಿ ನಿಂದಿಸುತ್ತಿದ್ದಾರೆ. ಸುದೀಪ್ ಅವರ ಘನತೆಗೆ ಚ್ಯುತಿ ತರವಂತಹ ಹೇಳಿಕೆ ನೀಡುತ್ತಿರುವುದು ಬೇಸರದ ಸಂಗತಿಯಾಗಿದೆ.
ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಸಾರ್ವಜನಿಕರಲ್ಲಿ ಇಲ್ಲಸಲ್ಲದ ಗೊಂದಲ ನಿರ್ಮಾಣ ಮಾಡುತ್ತಿರುವ ಅಹೋರಾತ್ರ ಹಾಗೂ ಚರಣ್ ಎನ್ನುವವರ ಮೇಲೆ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.