ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ರಸ್ತೆ ಬದಿ ಖಾಸಗಿ ಬಸ್ಸು ಉರುಳಿ ಬಿದ್ದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಣಾಪಾಯದಿಂದ ಪಾರಾಗಿದ್ದಾರೆ.