ಯುಪಿ ಬಿಜೆಪಿಗೆ ಅಘಾತ : ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ

ಉತ್ತರ ಪ್ರದೇಶ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಯುಪಿ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಅ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮೊಂದಿಗೆ 9 ಬಿಜೆಪಿಯ ಶಾಸಕರು ಹಾಗೂ ಒಬ್ಬ ಸಚಿವರ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಯನ್ನು ತೊರೆಯಲಿದ್ದಾರೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರ ಇಡಿಯಬೇಕು ಎನ್ನುವ ಬಿಜೆಪಿ ಪಕ್ಷಕ್ಕೆ ಅಘಾತ ನೀಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಅವರು ಸಮಾಜವಾದಿ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ಬಗ್ಗೆ ಮೂಲಗಳಿಂದ ತಿಳಿದುಬಂದಿದೆ.

ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಈ ಹಿಂದಿನ 2017 ರ ಚುನಾವಣೆಯ ಸಂದರ್ಭದಲ್ಲಿ ಬಹುಜನ ಸಮಾಜವಾದಿ (ಬಿಎಸ್​ಪಿ) ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ತೊರೆದು ಸಮಾಜವಾದಿ (ಎಸ್​ಪಿ) ಪಕ್ಷ ಸೇರಲು ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here