ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದ್ದರು.
ಪ್ರತಿಪಕ್ಷಗಳ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಅವರು ಮಂಗಳವಾರ ನಾಮಪತ್ರ ಸಲ್ಲಿಸುತ್ತಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ.
ಇಂದು ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ನಡೆಯುತ್ತಿದೆ.
ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 19 ಮಂಗಳವಾರ ಕೊನೆಯ ದಿನವಾಗಿದೆ. ಅಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.