ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಒಕ್ಕೂಟದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ.
ಮಾರ್ಗರೇಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾರಾಷ್ಟ್ರದ ಎನ್ಸಿಪಿ ನಾಯಕ ಶರದ್ ಪವಾರ್ ಅವರು ಘೊಷಣೆ ಮಾಡಿದರು.
ಮಾರ್ಗರೇಟ್ ಆಳ್ವ ಅವರು ಹಿರಿಯ ರಾಜಕರಾಣಿ. ಈಗಾಗಲೇ ಗೋವಾ, ರಾಜಸ್ಥಾನ, ಗುಜರಾತ್ ಮತ್ತು ಉತ್ತರಾಖಂಡ್ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ನಿನ್ನೆಯಷ್ಟೇ, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಬಿಜೆಪಿ ನಾಯಕರಾಗಿದ್ದ ಜಗದೀಪ್ ಧನ್ಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.
ಉಪರಾಷ್ಟ್ರಪತಿಯಾಗಿ ಆಯ್ಕೆಯಾಗುವವರು ರಾಜ್ಯಸಭೆಯ ಸಭಾಪತಿಯಾಗಿಯೂ ಆಯ್ಕೆಯಾಗುತ್ತಾರೆ.
ಉಪರಾಷ್ಟ್ರಪತಿ ಚುನಾವಣೆಗೆ ನಾಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕ. ಅಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.