ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾರ್ಗರೇಟ್ ಆಳ್ವ ಅವರ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎನ್ಸಿಪಿಯ ಮುಖ್ಯಸ್ಥ ಶರದ್ ಪವಾರ್, ಸಿಪಿಎಂ ಪಕ್ಷದ ಸೀತಾರಾಂ ಯೆಚೂರಿ, ಸಪಿಐನ ಡಿ ರಾಜಾ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಜೊತೆಗಿದ್ದರು.
ಮಾಜಿ ಕಾಂಗ್ರೆಸ್ ನಾಯಕಿ, ಹಲವು ರಾಜ್ಯಗಳ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿರುವ 80 ವರ್ಷದ ಮಾರ್ಗರೇಟ್ ಆಳ್ವ ಅವರು ನಿನ್ನೆ ಸೋಮವಾ ನಾಪತ್ರ ಸಲ್ಲಿಸಿರುವ ಎನ್ಡಿಎ ಅಭ್ಯರ್ಥಿ ಜಗ್ದೀಪ್ ಧನ್ಕರ್(71) ಅವರನ್ನು ಎದುರಿಸಲಿದ್ದಾರೆ.
ಪ್ರಸ್ತುತ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಅಗಸ್ಟ್ 6 ರಂದು ಮುಕ್ತಾಯಗೊಳ್ಳಲಿದೆ. ಉಪರಾಷ್ಟ್ರಪತಿಯಾಗಿ ಆಯ್ಕೆಯಾದವರು ರಾಜ್ಯಸಭೆಯ ಸಭಾಪತಿಯಾಗಿಯೂ ಆಯ್ಕೆಯಾಗುತ್ತಾರೆ.
ರಾಷ್ಟ್ರಪತಿ ಚುನಾವಣೆ ಸೋಮವಾರ ಮುಕ್ತಾಯಗೊಂಡಿದೆ. ಈ ಚುನಾವಣೆಯಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಎನ್ಡಿಎ ಅಭ್ಯರ್ಥಿಗೆ ಬೆಂಬಲ ನೀಡಿದ್ದವು. ಇದೀಗ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೀವ್ರ ಹೋರಾಟ ನಡೆದಿದೆ.
Opposition leaders jointly accompanied Smt @alva_margaret ji when she filed her nomination papers for Vice Presidential election.
We will continue to fight for the soul of our Nation and the Constitution undaunted. pic.twitter.com/or07WZsq4s
— Mallikarjun Kharge (@kharge) July 19, 2022
ಈ ಬಗ್ಗೆ ಮಾತನಾಡಿರುವ ಮಾರ್ಗರೇಟ್ ಆಳ್ವಾ ಅವರು, ಕಣದಲ್ಲಿನ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ. ಗೆಲವು ಮತ್ತು ಸೋಲು ಎನ್ನುವುದು ಒಂದು ಸಮಸ್ಯೆಯಲ್ಲ. ನಾನು ಯಾರಿಗೋ ಭಯ ಪಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಮಾರ್ಗರೇಟ್ ಆಳ್ವ ಅವರು 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿಯವರ ಸಮಯದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ. ಗೋವಾ, ಗುಜರಾತ್, ರಾಜಸ್ಥಾನ ಮತ್ತು ಉತ್ತರಾಖಂಡ್ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.