ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅವಧಿ ಅಗಸ್ಟ್ 10 ರಂದು ಮುಕ್ತಾಯಗೊಳ್ಳಲಿದೆ.
ಜುಲೈ 5 ರಂದು ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿರಲಿದೆ, ಜುಲೈ 20 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆದ ದಿನವಾಗಿದ್ದು, ಅಗಸ್ಟ್ 6 ರಂದು ಮತದಾನ ನಡೆಯಲಿದೆಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ರಾಷ್ಟ್ರಪತಿ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಜುಲೈ18 ರಂದು ಚುನಾವಣೆ ನಡೆಯಲಿದೆ.