ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಮಾಡಿದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಇಡಲಾಗಿದೆ. ಇಲ್ಲಿ ಆರೋಪಿಗಳು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದಾರೆ ಎಂದು ಕಲೆ ದಿನಗಳ ಹಿಂದೆ ಸುದ್ದಿ ಹರಿದಾಡಿತ್ತು. ಇದೀಗ ಸ್ವತಃ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರೇ ಕಾರಾಗೃಹಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೈದಿಗಳ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ಜೈಲು ಸಿಬ್ಬಂದಿ ಜತೆ ತೆರಳಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೈದಿಗಳ ಬ್ಯಾರಕ್ಗಳನ್ನು ತಪಾಸಣೆ ನಡೆಸಿದರು. ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಕೈದಿಗಳಿಗೆ ಸೂಚನೆ ನೀಡಿದರು. ಅತಿ ಭದ್ರತಾ ಬ್ಯಾರಕ್ ಗಳಿಗೆ ಭೇಟಿ ನೀಡಿ, ಮಾದಕ ವಸ್ತು ಹಾಗೂ ಮೊಬೈಲ್ ಬಳಕೆ ಕುರಿತು ತಪಾಸಣೆ ಮಾಡಿದರು.
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.
ಜೈಲಿನಲ್ಲಿರುವ ಸೌಲಭ್ಯ, ಮಹಿಳಾ ಕೈದಿಗಳ ಸಮಸ್ಯೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಹವಾಲು ಸ್ವೀಕರಿಸಿದ್ದಾರೆ.