‘ಲೈಗರ್’ ಸಿನಿಮಾದ ಖಡಕ್ ಖಳನಾಯಕ ಇವ್ರೇ..! ವಿಜಯ್ ದೇವರಕೊಂಡ ಎದುರು ಇವ್ರೇ ವಿಲನ್​..!

Liger Movie

ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್​ನ ‘ಲೈಗರ್’ ಸಿನಿಮಾ ರಿಲೀಸ್ ಗೆ ಇನ್ನೇನೂ ದಿನಗಣನೆ ಶುರುವಾಗಿದೆ.

ಇದೇ 25ರಂದು ಪಂಚ ಭಾಷೆಯಲ್ಲಿ ಚಿತ್ರ ಮೆರವಣಿಗೆ ಹೊರಡಲಿದೆ. ಬಾಕ್ಸರ್ ಆಗಿ ಅಬ್ಬರಿಸಲಿರುವ ವಿಜಯ್ ಎದುರು ವಿಶ್ ಎಂಬ ಯುವ ನಟ ಖಳನಾಯಕನಾಗಿ ತೊಡೆ ತಟ್ಟಲಿದ್ದಾರೆ.

ಪುರಿ ಕನೆಕ್ಟ್ಸ್ ಪ್ರೊಡಕ್ಷನ್ ಹೌಸ್ ನ ಸಿಇಒ ಕೆಲಸ ಮಾಡಿರುವ, ಸಾಕಷ್ಟು ಸಿನಿಮಾಗಳಿಗೆ ತೆರೆಹಿಂದೆ ದುಡಿದಿರುವ ವಿಶ್ ಲೈಗರ್ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ.

ಬಾಕ್ಸಿಂಗ್ ರಿಂಗ್ ನಲ್ಲಿ ವಿಶ್ ವಿಜಯ್ ಎದುರು ಪೈಪೋಟಿ ನಡೆಸಲಿದ್ದಾರೆ.

ಪುರಿ ಕನೆಕ್ಟ್ಸ್ ಹಾಗೂ ಧರ್ಮ ಪ್ರೊಡಕ್ಷನ್ ನಡಿ ರೆಡಿಯಾಗಿರುವ ಪ್ಯಾನ್ ಇಂಡಿಯಾ ಚಿತ್ರ ಲೈಗರ್ ಗೆ ಪುರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿದ್ದು, ವಿಜಯ್ ಗೆ ಜೋಡಿಯಾಗಿ ಅನನ್ಯ ಪಾಂಡೇ ನಟಿಸಿದ್ದಾರೆ.

ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದಿಂದ ವಿಜಯ್ ವೃತ್ತಿ ಜೀವನಕ್ಕೆ ಮೈಲೇಜ್ ಸಿಗುವ ಸಾಧ್ಯತೆ ಇದೆ.

ಬಾಕ್ಸಿಂಗ್ ಲೋಕದ ದಿಗ್ಗಜ ಮೈಕ್ ಟೈಸನ್ ಕೂಡ ನಟಿಸಿದ್ದು, ರಮ್ಯಾ ಕೃಷ್ಣ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here