ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.
ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.
ವಿಜಯ್ ರಾಘವೇಂದ್ರ ಮತ್ತು ಸೌರ್ಯ ಅವರು ವಿಶೇಷ ವಿಮಾನದಲ್ಲಿ ಮಲೇಷ್ಯಾಕ್ಕೆ ಪ್ರಯಾಣಿಸಿದ್ದಾರೆ.
16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. ಆಗಸ್ಟ್ 26, 2007ರಂದು ಮದುವೆ ಆಗಿದ್ದರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಪುತ್ರಿ. ಬಿ ಕೆ ಶಿವರಾಂ ಅವರು ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಅವರ ಸಹೋದರ.
ADVERTISEMENT
ADVERTISEMENT