ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ, ಟೀಸರ್ ಬಿಡುಗಡೆಯಾದ ನಂತರ ಪ್ರೇಕ್ಷಕರು ಮತ್ತು ವಿಮರ್ಶಕರು ಜುಲೈ 28 ರಂದು ಪ್ರಪಂಚದಾದ್ಯಂತದ ರಿಲೀಸ್ ಆಗುವ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದು, ಸಿನೆಮಾಗಾಗಿ ಉತ್ಸುಕತೆಯಿಂದ ಕಾಯುತ್ತಿದ್ದಾರೆ.
ಈ ವೈಭವವನ್ನು ಹೆಚ್ಚಿಸಲು, ವಿಕ್ರಾಂತ್ ರೋಣ ಚಿತ್ರವನ್ನು ಈಗ ಉತ್ತರ ಭಾರತದಲ್ಲಿ ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆ SKF ಪ್ರಸ್ತುತಪಡಿಸುತ್ತದೆ. ನಿರ್ದೇಶಕ ಅನುಪ್ ಭಂಡಾರಿಯವರ ಅದ್ಭುತ ದೃಷ್ಟಿಕೋನದಲ್ಲಿ ತೆಗೆದಿರುವ ಈ ಚಿತ್ರವು ಜನರಿಗೆ ಆಸನದ ಅಂಚಿನ ಅನುಭವವನ್ನು ಕೊಡಲು ಸಜ್ಜಾಗಿದೆ.
ಪ್ಯಾನ್ ವರ್ಲ್ಡ್ 3D ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಮತ್ತು ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್, ಇಂಗ್ಲಿಷ್ ಇತ್ಯಾದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಜುಲೈ 28 ರಂದು ವಿಶ್ವಾದ್ಯಂತ 3D ನಲ್ಲಿ ಬಿಡುಗಡೆಯಾಗಲಿದೆ, ಇದರಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಝೀ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿದ್ದು, ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಇನ್ವೆನಿಯೊ ಒರಿಜಿನ್ಸ್ನ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ.