ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ ಆರತಕ್ಷಣೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ.
ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯ ಅವರಿಗೆ.
ಭೇಟಿ ಕ್ಷಣದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ. ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಮಾತಾಡಿದ್ದಾರೆ.
ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ.
ADVERTISEMENT
ADVERTISEMENT