ನಾಳೆಯಿಂದ ಅಂದರೆ ಜನವರಿ 3ರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 5ನೇ ಮತ್ತು ಕಡೆಯ ಟೆಸ್ಟ್ ಪಂದ್ಯವನ್ನು ಆಡಲಿದೆ. ಈಗಾಗಲೇ 3-0 ಅಂತರದಿಂದ ಟೆಸ್ಟ್ ಸರಣಿಯನ್ನು ಸೋತಿರುವ ಟೀಂ ಇಂಡಿಯಾ ತನ್ನ ಗೌರವ ಉಳಿಸಿಕೊಳ್ಳುವುದಕ್ಕಾಗಿ ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಅನಿವಾರ್ಯ.
4 ಪಂದ್ಯಗಳಲ್ಲಿ ಹೀನಾಯ ಹಿನ್ನಡೆ ಬಳಿಕ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ವಿರುದ್ಧ ಕಟು ಟೀಕೆ-ಟಿಪ್ಪಣಿಗಳು ಕೇಳಿಬಂದಿವೆ. ಸಿಡ್ನಿಯಲ್ಲಿ ನಡೆಯಲಿರುವ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಆಡುವುದು ಅನುಮಾನವಾಗಿದೆ.
ಈ ನಡುವೆ ಟೆಸ್ಟ್ ನಾಯಕತ್ವದಲ್ಲೂ ಮಹತ್ವದ ಬದಲಾವಣೆ ಆಗುವ ನಿರೀಕ್ಷೆ ಇದೆ. ಮಾಹಿತಿಗಳ ಪ್ರಕಾರ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ಟೆಸ್ಟ್ ನಾಯಕತ್ವ ನೀಡುವ ನಿರೀಕ್ಷೆ ಇದೆ. ಅಂದರೆ ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟರೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಬಹುದು ಎಂಬ ನಿರೀಕ್ಷೆ ದಟ್ಟವಾಗಿದೆ.
ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರೀಕ್ಷೆ ಇದೆ. ಆದರೆ ಕೆಲವು ವರದಿಗಳ ಪ್ರಕಾರ ತಮ್ಮ ನಿವೃತ್ತಿ ಘೋಷಣೆಯನ್ನು ರೋಹಿತ್ ಮುಂದೂಡಬಹುದು.
ADVERTISEMENT
ADVERTISEMENT