ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜಲಪಾತಗಳ ವೀಕ್ಷಣೆಗೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರು ಸಂಖ್ಯೆ ಏರುತ್ತಿದ್ದಾರೆ. ಅಲ್ಲದೇ ಹಲವು ಕಡೆಗಳಲ್ಲಿ ಜಲಪಾತ ವೀಕ್ಷಣೆಗೆ ಬಂದವರು ಕೊಚ್ಚಿಕೊಂಡು ಹೋಗಿರುವ ಅವಘಡಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.
ಕೊಲ್ಲೂರು, ಸಿದ್ದಾಪುರ, ಅಮಾಸೆಬೈಲು, ಹೆಬ್ರಿ, ಕಾರ್ಕಳ, ಬೆಳ್ತಂಗಡಿ, ಕುದುರೆಮುಖ ಮತ್ತು ಕೆರೆಕಟ್ಟೆ ವನ್ಯಜೀವಿ ವಲಯದಲ್ಲಿರುವ ಜಲಪಾತಗಳ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.
ಜಲಪಾತಗಳ ಪ್ರವೇಶ ದ್ವಾರಗಳಲ್ಲಿ ಸೂಚನಾ ಫಲಕ ಅಳವಡಿಸುವಂತೆ ಮತ್ತು ಕಾವಲುಗಾರರನ್ನು ನೇಮಿಸುವಂತೆ ಆದೇಶಿಸಲಾಗಿದೆ.
ADVERTISEMENT
ADVERTISEMENT