ADVERTISEMENT
ಕರ್ನಾಟಕದ ಒಂಭತ್ತು ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆ 8.30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇವತ್ತು ಅಂದರೆ ಡಿಸೆಂಬರ್ 27ರಿಂದ ನಾಳೆ ಬೆಳಗ್ಗೆ ಅಂದರೆ ಡಿಸೆಂಬರ್ 28ರ ಬೆಳಗ್ಗೆ 8.30ರವರೆಗೆ ಹಗುರ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಹಗುರ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿಯಲ್ಲೂ ನಾಳೆ ಬೆಳಗ್ಗೆವರೆಗೆ ಹಗುರ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ 21 ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ADVERTISEMENT