ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ಸಂಬಂಧ ವಾಟ್ಸಾಪ್ ಗ್ರೂಪ್ ಅಡ್ಮಿನ್ನನ್ನು ಬಂಧಿಸಲಾಗಿದೆ.
ವಾಟ್ಸಾಪ್ ಗ್ರೂಪ್ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ಮಾಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಬಗ್ಗೆ ವಾಟ್ಸಾಪ್ ಗ್ರೂಪ್ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರ ಬಗ್ಗೆ ಆಗಸ್ಟ್ 4ರಂದು ಟ್ವಿಟ್ಟರ್ನಲ್ಲಿ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿಲ್ ಶಹಬುದ್ದೀನ್ ಅನ್ಸಾರಿಯನ್ನು ಬಂಧಿಸಲಾಗಿದೆ. ಪೋಸ್ಟ್ ಹಾಕಿದ್ದ ಅನ್ಸಾರಿ ಹೆಸರಿನ ಮತ್ತೋರ್ವನಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.
ನಗರ ಪಾಲಿಕ ಪರಿಷತ್ ಭದೋಯಿ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಮಾಡಲಾಗಿತ್ತು. ಆ ವಾಟ್ಸಾಪ್ ಗ್ರೂಪ್ನಲ್ಲಿ ಪಾಲಿಕೆ ಸದಸ್ಯರೂ ಇದ್ದರು. ಸಾರ್ವಜನಿಕರಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳಲು ಈ ಗ್ರೂಪ್ ಮಾಡಲಾಗಿತ್ತು. ಆದರೆ ಇದು ಕಾರ್ಪೋರೇಟರ್ಗಳ ಅಧಿಕೃತ ವಾಟ್ಸಾಪ್ ಗ್ರೂಪ್ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ.
ADVERTISEMENT
ADVERTISEMENT