ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನ ಮಡಿಕೇರಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ವ್ಯಾಪಕ ಮಳೆಯಾಗುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ, ಸೇತುವೆಗಳ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.