ADVERTISEMENT
ಬಿಜೆಪಿ ವಿರೋಧಿ ಸಭೆಗೆ ನಾನು ಹೋಗಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹೀಗಾಗಿ ಆ ಸಭೆಗೆ ಹೋಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ನಮ್ಮದು ಸಣ್ಣ ಪಕ್ಷ. ಅದನ್ನು ಬೆಳೆಸುತ್ತೇವೆ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಹೇಳಿಕೆ ಮಹತ್ವ ಪಡೆದಿದೆ.
ಜುಲೈ 13 ಮತ್ತು 14ರಂದು ಬೆಂಗಳೂರಲ್ಲಿ ಲೋಕಸಭಾ ಚುನಾವಣೆ ರಣತಂತ್ರದ ಭಾಗವಾಗಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ದೆಹಲಿಯಲ್ಲಿ ನಡೆದ ಸಭೆಗೂ ಜೆಡಿಎಸ್ ಭಾಗವಹಿಸಲಿರಲಿಲ್ಲ.
ADVERTISEMENT