ಜೆಡಿಎಸ್ ನಾಯಕ ಮತ್ತು ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.
ನಾಳೆ ಅಂದರೆ ಡಿಸೆಂಬರ್ 15ರಂದು ವಿರೋಧ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಆಗಲಿದ್ದಾರೆ.
ಬಳಿಕ ಡಿಸೆಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ವೈ ಎಸ್ ವಿ ದತ್ತಾ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷರಾದ ರಾಜಣ್ಣ ಅವರು ತಮ್ಮ ಜೊತೆಗೆ ದತ್ತಾ ಅವರು ಹಂಚಿಕೊಂಡಿರುವ ವಿಷಯದ ಬಗ್ಗೆ ದತ್ತಾ ಅವರ ಅಭಿಮಾನಿಗಳಿಗೆ ಆಡಿಯೋ ಮೂಲಕ ಸಂದೇಶ ಹಂಚಿಕೊಂಡಿದ್ದಾರೆ.
ದತ್ತಾ ಅವರು ಬೇಷರತ್ ಆಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದತ್ತಾ ಅವರ ಜೊತೆಗೆ ನಾವೂ ಸಿದ್ದರಾಮಯ್ಯರನ್ನು ಭೇಟಿ ಆಗಲಿದ್ದೇವೆ ಎಂದು ರಾಜಣ್ಣ ಅವರು ಹೇಳಿದ್ದಾರೆ.
ADVERTISEMENT
ADVERTISEMENT