ನಟಿ ಸಮಂತಾ ಅಭಿನಯದ ಬಹುನಿರೀಕ್ಷಿತ ಯಶೋದಾ ಸಿನೆಮಾದ ಟೀಸರ್ ಇದೇ ಸೆ.9 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಸ್ನೇಕ್ ಪೀಕ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಯಶೋದ ಚಿತ್ರ ಹುಟ್ಟುಹಾಕಿದೆ.
ಯಶೋದ ಚಿತ್ರದ ಟ್ರೈಲರ್ ಬಿಡುಗಡೆಗೆ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಳವಾಗಿದೆ. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ.
ಇದನ್ನೂ ಓದಿ : ಯೂಟ್ಯೂಬ್ ಚಾನೆಲ್ಗಳ ವಿರುದ್ಧ ಪ್ರಕರಣ ದಾಖಲಿಸಿದ ನಟಿ ಸಮಂತಾ
ನಟಿ ಸಮಂತಾ ಜೊತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ರ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಯಶೋದಾ ಚಿತ್ರಕ್ಕೆ ಮಣಿಶರ್ಮ ಸಂಗೀತ ಸಂಯೋಜಿಸಿದ್ದು, ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ, ಚಂದ್ರಬೋಸ್ ಮತ್ತು ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ಯಶೋದಾ ಚಿತ್ರವು ಸದ್ಯದಲ್ಲೇ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.