ಜುಲೈನಲ್ಲಿ ವಿಧಾನಸಭೆ ಅಧಿವೇಶನ ನಿಗದಿಯಾಗಿದೆ.. ಹೀಗಾಗಿ ಈ ವಾರವೇ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಮತ್ತು ಪಕ್ಷದ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಕಸರತ್ತು ನಡೆಸುತ್ತಿದೆ.
ರಾಜ್ಯದ ಎರಡು ಪ್ರಭಾವಿ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ನೇತಾರರನ್ನೇ ಬಿಜೆಪಿಯ ಈ ಎರಡು ಪ್ರಬಲ ಹುದ್ದೆಗಳಿಗೆ ಪರಿಗಣಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.
ಬಿಜೆಪಿ ಹೈಕಮಾಂಡ್ ಮುಂದೆ ಹಲವು ಹೆಸರುಗಳು ಪರಿಶೀಲನೆಯಲ್ಲಿದ್ದು, ಪಕ್ಷದ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಮತ್ತು ಇತರೆ ನಾಯಕರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದೆ.
ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಥಾನಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತು ಮಲ್ಲೇಶ್ವರಂ ಶಾಸಕ ಡಾ.ಸಿಎನ್ ಅಶ್ವಥ್ ನಾರಾಯಣ್ ಹೆಸರುಗಳು ಶಾರ್ಟ್ ಲಿಸ್ಟ್ ಆಗಿವೆ ಎಂದು ತಿಳಿದುಬಂದಿದೆ. ಇವರಿಬ್ಬರ ಪೈಕಿ ಒಬ್ಬರು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದು ಖಚಿತವಾಗಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹಿರಿಯ ನಾಯಕ, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ್ ಬೆಲ್ಲದ್ ಹೆಸರುಗಳು ಶಾರ್ಟ್ಲಿಸ್ಟ್ ಆಗಿದೆ. ಇವರಿಬ್ಬರ ಪೈಕಿ ಒಬ್ಬರು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದು ಖಚಿತವಾಗಿದೆ.
ಹೀಗೆ ಮಾಡುವುದರಿಂದ ಸಮುದಾಯವಾರು, ಪ್ರಾದೇಶಿಕವಾರು ಸಮತೋಲನ ಸಾಧಿಸಿದಂತಾಗುತ್ತದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಫೈರ್ ಬ್ರಾಂಡ್ಗಳಿಗೆ ಮಣೆ ಹಾಕಿದಲ್ಲಿ ಉತ್ತಮ ಎಂಬ ಚರ್ಚೆಗಳು ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿದೆ.
ADVERTISEMENT
ADVERTISEMENT