ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪನವರ ಅವಧಿ ಮುಗಿದಿದೆ ಎಂಬ ಅಚ್ಚರಿ ಹೇಳಿಕೆಯನ್ನು ರಾಮನಗರದಲ್ಲಿ ಸಚಿವ ಅಶ್ವತ್ ನಾರಾಯಣ್ ನೀಡಿದ್ದಾರೆ.
ಇಂದು ರಾಮನಗರದಲ್ಲಿ ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತಿರಸ್ಕಾರ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮಗೆ ಮಾರ್ಗದರ್ಶಕರು ಯಡಿಯೂರಪ್ಪ ನವರು. ವ್ಯಕ್ತಿಗತವಾಗಿ ಯಾವುದೇ ಪಕ್ಷ ಇಲ್ಲ, ಪಕ್ಷದಿಂದ ವ್ಯಕ್ತಿ. ನಮ್ಮಲ್ಲಿ ಯಾವುದೇ ತಾರತಮ್ಯ ಇಲ್ಲ. ಅವಧಿ ಮುಗಿದಿರುವ ಎಲ್ಲರನ್ನ ತೆಗೆಯಲಾಗಿದೆ. ನಮ್ಮಲ್ಲಿ ಒಂದೇ ವ್ಯವಸ್ಥೆ, ಒಬ್ಬೊಬ್ಬರಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಆ ಮೂಲಕ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ ನಾರಾಯಣ್ ಅವರು, ಬಿಜೆಪಿಯಲ್ಲಿ ಯಡಿಯೂರಪ್ಪನವರ ಕಾಲ ಮುಗಿದಿದೆ. ನಮ್ಮಲ್ಲಿ ಎಲ್ಲರಿಗೂ ಒಂದೇ ವ್ಯವಸ್ಥೆಯಿದೆ. ಯಡಿಯೂರಪ್ಪನವರಿಗಾಗಿ ಪ್ರತ್ಯೇಕ ವ್ಯವಸ್ಥೆ ಇಲ್ಲ ಎಂದು ಹೇಳಿದ್ದಾರೆ.