ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಶವವಾಗಿ ಪತ್ತೆಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ. ಮಹದೇವಯ್ಯ ಕಾರು ಪತ್ತೆಯಾದ ಕೆಲವೇ ದೂರದಲ್ಲಿ ಮೃತದೇಹ ಸಿಕ್ಕಿದೆ.
ಶುಕ್ರವಾರವಷ್ಟೇ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಏಕಾಏಕಿ ನಾಪತ್ತೆಯಾಗಿದ್ದರು.
ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ತೋಟದ ಬರುತ್ತಿದ್ದರು.ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರುವ ಶಂಕೆ ಇದೆ. ಮಹದೇವಯ್ಯ ಕಾರಿನಲ್ಲಿ ರಕ್ತದ ಕಲೆ ಪತ್ತೆಯಾಗಿದೆ.ಬಿಜೆಪಿ ಎಂಎಲ್ಸಿ ಯೋಗೇಶ್ವರ್ ಭಾವ ಮೃತದೇಹ ಪತ್ತೆಯಾಗಿದೆ.